ಚೈತನ್ಯ ನ್ಯೂಸ್ ೨೪ ರಂಭಾಪುರಿ ಪೀಠ (ಬಾಳೆಹೊನ್ನೂರು) ಜೂನ್ ೨:
.
ಜೂನ್ ೩ರಂದು ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಶುಭ ಹಾರೈಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ರಾಜ್ಯದ ವಿವಿಧ ಖಾತೆಗಳ ಸಚಿವರಾಗಿ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಕಮೀಟಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅಪಾರ ಅನುಭವ ಹೊಂದಿದ್ದಾರೆ. ಬಾಳೆಹೊನ್ನೂರು ಲಿಂ. ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ಆರಾಧಕರಾಗಿ ಅವರ ಆಶೀರ್ವಾದದಿಂದ ಉನ್ನತ ಸ್ಥಾನ ಅಲಂಕರಿಸಲಿದ್ದಾರೆ. ಅವರ ಮುಂದಿನ ಅವಧಿಯಲ್ಲಿ ರಾಜ್ಯದಲ್ಲಿ ಜನಕಲ್ಯಾಣ ಯೋಜನೆಗಳು ಜಾರಿಗೆ ಬರಲಿ. ಜಾತಿಗಳಿಗೆ ಆದ್ಯತೆ ಕೊಡದೇ ಆರ್ಥಿಕವಾಗಿ ಹಿಂದುಳಿದ ಎಲ್ಲ ವರ್ಗಗಳ ಜನತೆಗೆ ಅವರ ಯೋಜನೆಗಳು ತಲುಪುವಂತಾಗಲಿ. ಕೃಷಿಕರಿಗೆ ಅನುಕೂಲವಾಗುವ ಕಾರ್ಯಕ್ರಮಗಳಿಗೆ ಪ್ರಾಮುಖ್ಯತೆ ನೀಡಲಿ. ಸ್ಥಗಿತಗೊಂಡಿರುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವ ಅಗತ್ಯವಿದೆ. ಒಟ್ಟಾರೆ ಡಿ.ಕೆ.ಶಿವಕುಮಾರ್ ಅವಧಿಯಲ್ಲಿ ರಾಜ್ಯ ಸರ್ವತೋಮುಖ ಅಭಿವೃದ್ಧಿ ಹೊಂದಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ಶುಭ ಹಾರೈಸಿದ್ದಾರೆ.
ನೂತನ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಇವರಿಗೆ ಶ್ರೀ ರಂಭಾಪುರಿ ಜಗದ್ಗುರುಗಳ ಶುಭ ಹಾರೈಕೆ
71
previous post