ಚೈತನ್ಯ ನ್ಯೂಸ್ 24 ನರೇಗಲ್ಲ, ಮೇ 3:
ಪಟ್ಟಣದ ಅನ್ನದಾನ ವಿಜಯ ಬಾಲಕಿಯರ ಪ್ರೌಢಶಾಲೆಯಲ್ಲಿ ೨೦೨೫-೨೬ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆಗೈದ ವಿದ್ಯಾರ್ಥಿನಿಯರನ್ನು ಆಡಳಿತ ಮಂಡಳಿ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕೋಡಿಕೊಪ್ಪದ ಭಾರತಿ ರವಿ ಕುಂಬಾರ ಅವರು ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗಕ್ಕೆ ಸೇರುವ ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿಜ್ಞಾನ ಪಠ್ಯಪುಸ್ತಕಗಳು ಹಾಗೂ ಕಲಿಕಾ ಕಿಟ್ಗಳನ್ನು ವಿತರಿಸಿ ಪ್ರೋತ್ಸಾಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಮ್.ಪಿ. ತಳಬಾಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ ದೊಡ್ಡಮೇಟಿ ಹಾಗೂ ಆಡಳಿತ ಮಂಡಳಿ ಸದಸ್ಯರಾದ ನಿಂಗನಗೌಡ ಲಕ್ಕನಗೌಡ್ರ ಭಾಗವಹಿಸಿದ್ದರು.
ಮುಖ್ಯೋಪಾಧ್ಯಾಯರಾದ ಎಸ್.ಎನ್. ಹೂಲಗೇರಿ ವಿದ್ಯಾರ್ಥಿನಿಯರ ಸಾಧನೆಯನ್ನು ಅಭಿನಂದಿಸಿ, ೨೦೦೩-೦೪ನೇ ಸಾಲಿನ ಹಳೆಯ ವಿದ್ಯಾರ್ಥಿನಿಯರು ನೀಡಿದ ಸವಿನೆನಪಿನ ಕಾಣಿಕೆಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಎ.ಟಿ. ಮಳ್ಳಳ್ಳಿ, ಬಿ.ಡಿ. ಯರಗೊಪ್ಪ, ಎಮ್.ಎಸ್. ಅತ್ತಾರ, ಎಸ್. ಶಿವಮೂರ್ತಿ, ಎಸ್.ಎಫ್. ಧರ್ಮಾಯತ, ವಿ.ಕೆ. ಚುಳಕಿ, ಎಸ್.ಬಿ. ಕುರಡಗಿ ಹಾಗೂ ಕುಮಾರಿ ಬಸಮ್ಮ ಅಸುಂಡಿ ಉಪಸ್ಥಿತರಿದ್ದರು.