ಚೈತನ್ಯ ನ್ಯೂಸ್ 24 ದಾವಣಗೆರೆ: ಮೇ 8
ನಗರದ ಜಿಎಂ ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಧನೆ ಮತ್ತು ಸಾಂಸ್ಕೃತಿಕ ಪ್ರತಿಭೆಗಳ ಅಪೂರ್ವ ಸಂಗಮವಾಗಿರುವ ‘ಮಲ್ಲಿಕಾ’ ಸಾಂಸ್ಕೃತಿಕ ಉತ್ಸವ ಅಂತರಕಾಲೇಜು/ಅಂತರ ವಿಶ್ವವಿದ್ಯಾಲಯ ಸಾಂಸ್ಕೃತಿಕ ಉತ್ಸವವಾಗಿದೆ. ಈ ಪ್ರತಿಷ್ಠಿತ ಸಾಂಸ್ಕೃತಿಕ ಕಾರ್ಯಕ್ರಮವು ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಆಚರಣೆಗಳಲ್ಲಿ ಭಾಗವಹಿಸುವಂತೆ ಮಾಡುವುದರ ಜೊತೆಗೆ ವಿವಿದ ಸಂಸ್ಥೆಗಳ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಪ್ರತಿಭೆ, ಕಲಾತ್ಮಕ ಅಭಿವ್ಯಕ್ತಿ ಮತ್ತು ಸೃಜನಶೀಲ ಪ್ರದರ್ಶನಗಳನ್ನು ಹೊರಹಮ್ಮಿಸ ಲಿರುವ ಒಂದು ಉತ್ತಮ ವೇದಿಕೆಯಾಗಿದೆ ಎಂದು ಮಾಜಿ ಸಚಿವ ಹಾಗೂ ನರಗುಂದ ಮತಕ್ಷೇತ್ರದ ಹಾಲಿ ಶಾಸಕ ಸಿ ಸಿ ಪಾಟೀಲ ತಿಳಿಸಿದರು

ಮೇ 8 ರಂದು ಸಂಜೆ 6.30ಕ್ಕೆ ಜರುಗಿದ ಮಲ್ಲಿಕಾ ೨೬.೦ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮವನ್ನು ‘ಕೆಎಲ್ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ‘ಅಂತರ ಕಾಲೇಜು ಉತ್ಸವದಲ್ಲಿ ಮಣಿಪಾಲ್, ಮೈಸೂರು, ಬೆಳಗಾವಿ ಹಾಗೂ ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳ 20ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ 900ಕ್ಕೂ ಅಧಿಕ ಎಂಜಿನಿಯರಿಂಗ್ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ,

ಶೈಕ್ಷಣಿಕ ಸಾಧನೆ ಮಾಡಿದ ಜಿಎಂ ಶಿಕ್ಷಣ ಸಂಸ್ಥೆಯ ಪ್ರತಿಭಾನ್ವಿತ ನಾಲ್ವರು ವಿದ್ಯಾರ್ಥಿಗಳಿಗೆ ತಲಾ 10 ಗ್ರಾಂ ‘ಚಿನ್ನದ ಪದಕ’ ನೀಡಿ ಗೌರವಿಸಿ ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ನರಗುಂದ ಮತಕ್ಷೇತ್ರದ ಹಾಲಿ ಶಾಸಕ ಸಿ ಸಿ ಪಾಟೀಲರಿಗೆ ಗಣ್ಯಮಾನ್ಯರು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ , ಮಾಜಿ ಸಂಸದ ಜಿ ಎಂ ಸಿದ್ದೇಶ್ವರ ಸೇರಿದಂತೆ ಹಲವಾರು ಗಣ್ಯಮಾನ್ಯರು , ವಿಶ್ವವಿದ್ಯಾಲಯದ ಕುಲಪತಿಯಾದಿಯಾಗಿ ಸಿಬ್ಬಂದಿಗಳು , ಭಾಗವಹಿಸಿದ್ದರು