Home ಜಿಲ್ಲಾ ಸುದ್ದಿಗಳುಕೆಜಿಎಂಎಸ್ ಶಾಲೆಯಲ್ಲಿ ಪ್ರಥಮ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ

ಕೆಜಿಎಂಎಸ್ ಶಾಲೆಯಲ್ಲಿ ಪ್ರಥಮ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ

by Editor
0 comments

ಚೈತನ್ಯ ನ್ಯೂಸ್‌ 24 ನರೇಗಲ್ಲ ಜೂ.12:

ಪಟ್ಟಣದ ಕೆಜಿಎಂಎಸ್ ಶಾಲೆಯಲ್ಲಿ  ಪ್ರತಿವಷದಂತೆ ಈ ವರ್ಷವೂ ಒಂದನೇ ತರಗತಿಗೆ ಪ್ರವೇಶ ಪಡೆದ ಮಕ್ಕಳಿಗೆ ಶಿಕ್ಷಕರು ಹಾಗೂ ಶಾಲಾ ಎಸ್‌ ಡಿ ಎಂ ಸಿ ಯವರು ತಮ್ಮ ಸ್ವಂತ ಹಣ ಸಂಗ್ರಹಿಸಿ ಅದರಿಂದ ಮಕ್ಕಳಿಗೆ ಶಾಲಾ ಬ್ಯಾಗ ವಿತರಣೆ ಮಾಡಿದರು
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಆನಂದ್ ಕೊಟಗಿ ಮಕ್ಕಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೋಷಕರು ಹಾಗೂ ಶಿಕ್ಷಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಪ್ರಾಥಮಿಕ ಶಿಕ್ಷಣವು ಮಕ್ಕಳ ಭವಿಷ್ಯದ ಭದ್ರ ಬುನಾದಿಯಾಗಿದ್ದು, ವಿದ್ಯಾರ್ಥಿಗಳು ಶಾಲೆಯಲ್ಲಿನ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆದು ಉನ್ನತ ಸಾಧನೆ ಮಾಡಬೇಕೆಂದು ಕರೆ ನೀಡಿದರು.
ಶಾಲೆಯ  ಶಿಕ್ಷಕ ಬಸವರಾಜ ಕುರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

You may also like

Leave a Comment

ಕೆಜಿಎಂಎಸ್ ಶಾಲೆಯಲ್ಲಿ ಪ್ರಥಮ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ   ರೋಣ ಮತಕ್ಷೇತ್ರದ ಅಭಿವೃದ್ಧಿಗಾಗಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು: ಎ.ಸಿ. ಪಾಟೀಲ   ಜೂ.14 ರಂದು ‘ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ’   ಪ್ರೊ. ಬಿ. ಕೃಷ್ಣಪ್ಪನವರ ಸ್ಮರಣೆಯಲ್ಲಿ ಸೇವಾ ಕಾರ್ಯ ಕೈಗೊಂಡ ಡಿ.ಎಸ್.ಎಸ್.   ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ಶ್ರೀ ರಂಭಾಪುರಿ ಜಗದ್ಗುರುಗಳು