ಚೈತನ್ಯ ನ್ಯೂಸ್ 24 ಶಿವಮೊಗ್ಗ ಮೇ.14:
ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಶ್ರೀ ಜಗದ್ಗುರು ಪಂಚಾಚಾರ್ಯ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಮೇ 15ರಂದು ಸಂಸ್ಥೆಯ 32ನೇ ವರ್ಷಿಕೋತ್ಸವ, ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ವೀರಶೈವ-ಲಿಂಗಾಯತ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಮೇ 15ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ದಿವ್ಯ ಸಾನ್ನಿಧ್ಯ: ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಮಳಿಲಿ ಸಂಸ್ಥಾನ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಹಾಗೂ ದುಗ್ಲಿ-ಕಡೇನಂದಿಹಳ್ಳಿಯ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು. ಕರಡಿ-ಇಳಕಲ್ ಪಟ್ಟಣದ ಶ್ರೀ ಜಗದ್ಗುರು ಪಂಚಾಚಾರ್ಯ ಶಿಕ್ಷಣ ಸೊಸೈಟಿ ಕಾರ್ಯದರ್ಶಿ ಶಿವಯ್ಯ ಹಿರೇಮಠ ಅವರಿಗೆ ‘ಗುರುರಕ್ಷೆ’ ನೀಡಿ ಗೌರವಿಸಲಾಗುವುದು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ 5 ವಿದ್ಯಾರ್ಥಿಗಳಿಗೆ ಹಾಗೂ ಎಸ್.ಜೆ.ಪಿ ಐಟಿಐ ಸಿಬ್ಬಂದಿಯವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ಧರ್ಮ ಸಭೆಯ ನಂತರ ವೀರಶೈವ ಲಿಂಗಾಯತ ವಧು-ವರರ ಸಮಾವೇಶ ನಡೆಯಲಿದ್ದು, ವಿರಸಂಗಯ್ಯ ಬಿದರೆ ಅಧ್ಯಕ್ಷತೆ ವಹಿಸುವರು. ಉಮೇಶ್ ಹಿರೇಮಠ, ಹೆಚ್.ಎಂ.ಪ್ರೇಮಾ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹೆಚ್ಚಿನ ಮಾಹಿತಿಗಾಗಿ 9449831132 ಅಥವಾ 08182-240041 ಸಂಪರ್ಕಿಸಬಹುದು.
ಇತರ ಸೇವೆಗಳು:
ಸಮಾರಂಭದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ಉಚಿತ ನೇತ್ರ ತಪಾಸಣೆ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ. ಶ್ರೀ ರಂಭಾಪುರಿ ಜಗದ್ಗುರುಗಳನ್ನು ಎಂ.ಆರ್.ಎಸ್.ಸರ್ಕಲ್‌ನಿಂದ ಎಸ್.ಜೆ.ಪಿ. ಐಟಿಐ ವರೆಗೆ ವಿವಿಧ ವಾದ್ಯ ಮೇಳಗಳೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.