Home ಕರ್ನಾಟಕಸಂಘಟನೆ ಬೆಳೆಯಲಿ ಸಂಘರ್ಷ ಬೇಡ : ಶ್ರೀ ರಂಭಾಪುರಿ ಜಗದ್ಗುರುಗಳು

ಸಂಘಟನೆ ಬೆಳೆಯಲಿ ಸಂಘರ್ಷ ಬೇಡ : ಶ್ರೀ ರಂಭಾಪುರಿ ಜಗದ್ಗುರುಗಳು

by Editor
0 comments
ಚೈತನ್ಯ ನ್ಯೂಸ್ 24, ಶಿವಮೊಗ್ಗ: ಮೇ.16:
  ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಆದರ್ಶ ಚಿಂತನೆಗಳ ಅವಶ್ಯಕತೆಯಿದೆ. ಸಮಾಜದಲ್ಲಿ ಸಂಘಟನೆಗಳು ಬೆಳೆಯಲಿ ಆದರೆ ಅಧಿಕಾರಕ್ಕಾಗಿ ಸಂಘರ್ಷಗಳು ನಡೆಯಬಾರದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
  ಅವರು ಶನಿವಾರ ನಗರದ ಕುವೆಂಪು ರಂಗಮAದಿರದಲ್ಲಿ ಶ್ರೀ ಬಸವೇಶ್ವರಸ್ವಾಮಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಧರ್ಮ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
 ಸಮಾಜದ ಉನ್ನತಿಗೆ ಮತ್ತು ಶ್ರೇಯಸ್ಸಿಗೆ ರಚನಾತ್ಮಕ ಕಾರ್ಯಗಳು ನಡೆಯಬೇಕು. ಸುಖ ನೆಮ್ಮದಿಯ ಬದುಕಿಗೆ ಆರ್ಥಿಕ ಸಂಪನ್ಮೂಲ ಬಹಳ ಮುಖ್ಯ. ದೇಹವನ್ನು ದುಡಿಮೆಗೆ ಮನಸ್ಸನ್ನು ಭಗವಂತನಿಗೆ ಅರ್ಪಿಸಿ ನಡೆದಾಗ ಬದುಕು ವಿಕಾಸಗೊಳ್ಳುತ್ತದೆ. ಸಾಲ ಪಡೆದವರು ಮರುಪಾವತಿಯನ್ನು ಸಹ ಪ್ರಾಮಾಣಿಕವಾಗಿ ಮಾಡಿದಾಗ ಸಂಘ ಸಂಸ್ಥೆಗಳು ಬೆಳೆಯುತ್ತವೆ. ಕಣಗಿನಹಾಳದ ಎಸ್.ಎಸ್.ಪಾಟೀಲರು ಸಹಕಾರಿ ಸಂಘ ಹುಟ್ಟಿ ಹಾಕಿ ಬೆಳೆಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.
ಶ್ರೀ ಬಸವೇಶ್ವರಸ್ವಾಮಿ ಪತ್ತಿನ ಸಹಕಾರ ಸಂಘ ೧೯೨೫ರಲ್ಲಿ ಸ್ಥಾಪಿತಗೊಂಡು ೨೦೨೫ಕ್ಕೆ ನೂರು ವರುಷ ಪೂರ್ಣಗೊಂಡಿದೆ. ಈ ಶುಭ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಳ್ಳೇಕೆರೆ ಸಂತೋಷ ಅವರ ಮುಂದಾಳತ್ವದಲ್ಲಿ ಶತಮಾನೋತ್ಸವ ಸಮಾರಂಭ ಜರುಗುತ್ತಿರುವುದು ಸಂತೋಷದ ಸಂಗತಿ. ಈ ಸಂಘದ ಹುಟ್ಟಿನಿಂದ ಹಿಡಿದು ಇಲ್ಲಿಯವರೆಗೆ ಶ್ರಮಿಸಿದ ಆಡಳಿತ ಮಂಡಳಿಯ ನಿಸ್ವಾರ್ಥ ಸೇವೆ-ಸಹಕಾರ ಮನೋಭಾವದಿಂದ ಬೆಳೆದು ಬಲಗೊಂಡಿದೆ. ಅವರೆಲ್ಲರನ್ನು ಸ್ಮರಿಸಿ ಶುಭವನ್ನು ಹಾರೈಸುತ್ತೇವೆ ಎಂದ ಅವರು ವೀರಶೈವ-ಲಿಂಗಾಯತ ಜನತೆ ಎಲ್ಲಿಯವರೆಗೆ ಒಳ ಪಂಗಡಗಳನ್ನು ಮರೆತು ಒಗ್ಗಟ್ಟಾಗಿ ಬಾಳುವುದಿಲ್ಲವೋ ಅಲ್ಲಿಯವರೆಗೆ ಭವಿಷ್ಯವಿಲ್ಲ ಎಂದರು.
 ಸಾನ್ನಿಧ್ಯ ವಹಿಸಿದ ಶ್ರೀ ಕಾಶೀ ಪೀಠದ ಡಾ.ಚಂದ್ರಶೇಖರ ಜಗದ್ಗುಗುರುಗಳು ತಮ್ಮ ಆಶೀರ್ವಚನದಲ್ಲಿ ಸಂಘ ಸಂಸ್ಥೆಗಳು ಬೆಳೆದು ಬರಬೇಕಾದರೆ ಸದಸ್ಯರ ಸಹನೆ ಸಹಕಾರ ಮತ್ತು ತಾಳ್ಮೆ ಬಹಳ ಮುಖ್ಯ. ಪರಸ್ಪರ ಸಹಕಾರದಿಂದ ಸಮೃದ್ಧಿ ಉಂಟಾಗುವುದರಲ್ಲಿ ಸಂದೇಹವಿಲ್ಲ. ಆರ್ಥಿಕವಾಗಿ ದುರ್ಬಲಗೊಂಡ ಜನತೆಗೆ ಸಂಘವು ಸಹಕಾರ ನೀಡಿ ಬೆಳೆಸಿದ್ದನ್ನು ಮರೆಯಲಾಗದು. ಶ್ರೀ ಬಸವೇಶ್ವರಸ್ವಾಮಿ ಪತ್ತಿನ ಸಹಕಾರ ಸಂಘ ಇಂದು ಶತಮಾನೋತ್ಸವ ಆಚರಿಸುತ್ತಿರುವುದು ಸಂತೋಷ ತಂದಿದೆ ಎಂದರು.
 ಸಮಾರ0ಭ ಉದ್ಘಾಟಸಿದ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾತನಾಡಿ ಮನುಷ್ಯ ಶರೀರದಲ್ಲಿರುವ ಅಂಗಗಳು ಪರಸ್ಪರ ಸಹಕಾರದಿಂದ ಕಾರ್ಯ ನಿರ್ವಹಿಸುವ ಹಾಗೆ ಮನುಷ್ಯ ಸಮಾಜದಲ್ಲಿ ಪರಸ್ಪರ ಸ್ನೇಹ ಸಹಕಾರದಿಂದ ಬೆಳೆಯಲು ಸಾಧ್ಯವಾಗುತ್ತದೆ. ಸಹಕಾರ ಕ್ಷೇತ್ರದ ಅಭಿವೃದ್ಧಿಯಾದರೆ ಜನರಿಗೆ ಆರ್ಥಿಕವಾಗಿ ಹೆಚ್ಚು ಸಹಕರಿಸಲು ಅನುಕೂಲವಾಗುತ್ತದೆ. ಶ್ರೀ ಬಸವೇಶ್ವರಸ್ವಾಮಿ ಪತ್ತಿನ ಸಹಕಾರ ಸಂಘ ಹೆಮ್ಮರವಾಗಿ ಬೆಳೆದು ಇಂದು ಶತಮಾನೋತ್ಸವ ಸಂಭ್ರಮ ಜರುಗುತ್ತಿರುವುದು ಪೂರ್ವದ ಪದಾಧಿಕಾರಿಗಳ ಶ್ರಮ ಸಾಧನೆ ಎಂದರೆ ತಪ್ಪಾಗದು ಎಂದರು. ಸಂಸದ ಬಿ.ವೈ.ರಾಘವೇಂದ್ರ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಶ್ರೀ ಬಸವೇಶ್ವರಸ್ವಾಮಿ ಪತ್ತಿನ ಸಹಕಾರ ಸಂಘದ ಸಿದ್ಧಿ ಸಾಧನೆಗಳು ಸಣ್ಣವಲ್ಲ. ಸಂಘದ ಎಲ್ಲ ಸದಸ್ಯರು ಶ್ರಮ ವಹಿಸಿ ಬೆಳೆಸಿದ್ದಾರೆಂದರು.
ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ಮಳಲಿ ಮಠದ ಡಾ. ನಾಗಭೂಷಣ ಶಿವಾಚಾರ್ಯರು, ತೊಗರ್ಸಿ ಚನ್ನವೀರ ಶಿವಾಚಾರ್ಯರು, ತಾವರೆಕೆರೆ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಸಮ್ಮುಖ ವಹಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಬಳ್ಳೇಕೆರೆ ಸಂತೋಷ ಮಾತನಾಡಿ ಶ್ರೀ ಬಸವೇಶ್ವರಸ್ವಾಮಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಶ್ರೀ ರಂಭಾಪುರಿ ಮತ್ತು ಶ್ರೀ ಕಾಶೀ ಜಗದ್ಗುರುಗಳವ ದಿವ್ಯ ಸಾನ್ನಿಧ್ಯದಲ್ಲಿ ಜರುಗುತ್ತಿರುವುದು ಹೆಮ್ಮೆಯ ಸಂಗತಿ. ಪರಮ ಪೂಜ್ಯರ ಆಶೀವಾದ ಮತ್ತು ಜನರ ಸಹಕಾರ ಯಾವಾಗಲೂ ಇರಲೆಂದು ಬಯಸಿದರು. ಇದೇ ಸಂದರ್ಭದಲ್ಲಿ ವಿಶೇಷ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು.
  ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಸಂಸದ ಆಯನೂರು ಮಂಜುನಾಥ, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಸಿ.ಎಸ್.ದೇವರಾಜ, ಸಿ.ಎಸ್.ಷಡಕ್ಷರಿ, ಎಸ್.ಎಸ್.ಜ್ಯೋತಿಪ್ರಕಾಶ, ಎಸ್.ಕೆ.ಮರಿಯಪ್ಪ, ಎಸ್.ಪಿ.ದಿನೇಶ್, ಟಿ.ವಿ.ಶ್ರೀನಿವಾಸ, ತೇಜೋಮೂರ್ತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸಂಘದಲ್ಲಿ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಎಲ್ಲಾ ಸದಸ್ಯರಿಗೆ ಗೌರವ ಸಮರ್ಪಣೆ ಜರುಗಿತು. ಎಂ.ಆರ್. ಪ್ರಕಾಶ ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆ ಬೆಳೆದು ಬಂದುದನ್ನು ವಿವರಿಸಿದರು. ಸಂಘದ ಸಂಸ್ಥಾಪಕ ಅಧ್ಯಕ್ಷ ಮಹಾಲಿಂಗಪ್ಪನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಯಿತು. ಸಂಘದ ಉಪಾಧ್ಯಕ್ಷ ಕೆ.ಎಸ್.ತಾರಾನಾಥ ಸರ್ವರನ್ನು ಸ್ವಾಗತಿಸಿದರು. ಶಾಂತಾ ಆನಂದ ನಿರೂಪಿಸಿದರು.

You may also like

Leave a Comment

ಕೆಜಿಎಂಎಸ್ ಶಾಲೆಯಲ್ಲಿ ಪ್ರಥಮ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ   ರೋಣ ಮತಕ್ಷೇತ್ರದ ಅಭಿವೃದ್ಧಿಗಾಗಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು: ಎ.ಸಿ. ಪಾಟೀಲ   ಜೂ.14 ರಂದು ‘ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ’   ಪ್ರೊ. ಬಿ. ಕೃಷ್ಣಪ್ಪನವರ ಸ್ಮರಣೆಯಲ್ಲಿ ಸೇವಾ ಕಾರ್ಯ ಕೈಗೊಂಡ ಡಿ.ಎಸ್.ಎಸ್.   ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ಶ್ರೀ ರಂಭಾಪುರಿ ಜಗದ್ಗುರುಗಳು