Home ಕರ್ನಾಟಕರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳವರ ಮೌನ ಶಿವಾನುಷ್ಠಾನ

ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳವರ ಮೌನ ಶಿವಾನುಷ್ಠಾನ

by Editor
0 comments

 

ಚೈತನ್ಯ ನ್ಯೂಸ್ 24 ಕಡೇನಂದಿಹಳ್ಳಿ ಮೇ.27:

ಶಿಕಾರಿಪುರ ತಾಲೂಕಿನ ತಪೋಕ್ಷೇತ್ರ ಕಡೇನಂದಿಹಳ್ಳಿ ಶ್ರೀ ಮಳೆ ಮಲ್ಲೇಶ್ವರಸ್ವಾಮಿ ಜಾಗೃತ ಸ್ಥಳದಲ್ಲಿರುವ ಶ್ರೀಮದ್ ರಂಭಾಪುರಿ ಶಾಖಾ ಮಠ ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ನೂತನ ಶ್ರೀ ಗುರು ಪಟ್ಟಾಧಿಕಾರ ಸ್ವೀಕಾರ ಮಾಡಿದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳವರು ಐದು ದಿನಗಳ ಮೌನ ಶಿವಾನುಷ್ಠಾನವನ್ನು ಮಂಗಳವಾರ ಆರಂಭಿಸಿದರು.


ಅಧಿಕ ಜೇಷ್ಠ ಮಾಸದ ಪ್ರಯುಕ್ತ ಲೋಕ ಕಲ್ಯಾಣಕ್ಕಾಗಿ ಮನೋವಾಂಛಿತ ಸಿದ್ಧಿಗಾಗಿ ಆರಂಭಿಸಿರುವ ಮೌನ ಶಿವಾನುಷ್ಠಾನವನ್ನು ಮೇ ೩೦ ಶನಿವಾರದವರೆಗೆ ಮಾಡುವರು. ಮೇ ೩೧ರಂದು ಮೌನ ಶಿವಾನುಷ್ಠಾನ ಮಂಗಲ ಹಾಗೂ ಶ್ರೀ ಗುರು ಪಟ್ಟಾಧಿಕಾರ ಕಾರ್ಯಕ್ರಮದ ಅಭಿನಂದನಾ ಸಮಾರಂಭ ಜರುಗುವುದು. ಅಂದು ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಮಠದ ದೈವಗಳಿಗೆ ವಿಶೇಷ ಪೂಜೆ ತೀರ್ಥ ಪ್ರಸಾದ ವಿನಿಯೋಗ ನಡೆಯುವುದು. ನಂತರ ಶ್ರೀಗಳು ನೆಲಮಾಳಿಗೆಯಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿ ಮೌನಾಷ್ಠಾನವನ್ನು ಮಂಗಲಗೊಳಿಸುವರು. ನಂತರ ೧೧ ಗಂಟೆಗೆ ಗುರುಗಳ ದರ್ಶನ ಆಶೀರ್ವಚನ ನಡೆಯುವುದು. ಇದೇ ಸಂದರ್ಭದಲ್ಲಿ ಶ್ರೀ ಮಠದ ಹಿತೈಷಿಗಳಾದ ಸಂಸದ ಬಿ.ವೈ.ರಾಘವೇಂದ್ರ ಇವರಿಗೆ ವಿಶೇಷ ಗೌರವ ಸಮರ್ಪಣೆ ನಡೆಯುವುದು. ೫ ದಿನಗಳ ಕಾಲ ಜರುಗುವ ಮೌನ ಶಿವಾನುಷ್ಠಾನ ಸಮಯದಲ್ಲಿ ಶ್ರೀಗಳವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಪ್ರತಿ ತಿಂಗಳ ಹುಣ್ಣಿಮೆಯಂತೆ ಶ್ರೀಗಳವರ ದರ್ಶನಾಶೀರ್ವಾದ ಇರುತ್ತದೆ ಎಂದು ಶ್ರೀ ಗುರು ರೇವಣಸಿದ್ಧೇಶ್ವರ ಜನಕಲ್ಯಾಣ ಟ್ರಸ್ಟಿನ ಪ್ರಕಟಣೆಯಲ್ಲಿ ತಿಳಿಸಿದೆ.

You may also like

Leave a Comment

ಕೆಜಿಎಂಎಸ್ ಶಾಲೆಯಲ್ಲಿ ಪ್ರಥಮ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ   ರೋಣ ಮತಕ್ಷೇತ್ರದ ಅಭಿವೃದ್ಧಿಗಾಗಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು: ಎ.ಸಿ. ಪಾಟೀಲ   ಜೂ.14 ರಂದು ‘ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ’   ಪ್ರೊ. ಬಿ. ಕೃಷ್ಣಪ್ಪನವರ ಸ್ಮರಣೆಯಲ್ಲಿ ಸೇವಾ ಕಾರ್ಯ ಕೈಗೊಂಡ ಡಿ.ಎಸ್.ಎಸ್.   ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ಶ್ರೀ ರಂಭಾಪುರಿ ಜಗದ್ಗುರುಗಳು