ಚೈತನ್ಯ ನ್ಯೂಸ್ ೨೪ ನರೇಗಲ್ಲ ಜೂ.೨:
ಗದಗ ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಅಭಿವೃದ್ಧಿ ಹರಿಕಾರ ಎಂದು ಹೆಸರು ಪಡೆದಿರುವ ಶಾಸಕ ಜಿ.ಎಸ್. ಪಾಟೀಲರ ಅವರು ಕಾಂಗ್ರೆಸ್ ಪಕ್ಷಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಹಿರಿತನ ಆಧರಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಗಜೇಂದ್ರಗಡ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮೈಲಾರಪ್ಪ ವೀ. ಚಳ್ಳಮರದ ಹೈಕಮಾಂಡ್‌ಗೆ ಒತ್ತಾಯಿಸಿದರು.
ನರೇಗಲ್ ಪಟ್ಟಣದಲ್ಲಿ ಸೋಮವಾರ ನರೇಗಲ್ ಬ್ಲಾಕ್ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿ ನಾಲ್ಕು ಬಾರಿ ಶಾಸಕರಾಗಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರಾಗಿ,ಹಾಗು ಪ್ರಸ್ತುತ ಗದಗ ಜಿಲ್ಲಾ ಅಧ್ಯಕ್ಷರಾಗಿ ಜಿ.ಎಸ್.ಪಾಟೀಲ ಅವರು ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಅವರು ಕೇವಲ ಒಂದು ಸಮಾಜಕ್ಕೆ ಮೀಸಲಾಗದೆ ರ‍್ವ ಸಮಾಜದ ನಾಯಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಾ ಬಂದಿದ್ದಾರೆ ಮತ್ತು ಇಲ್ಲಿಯವರೆಗೆ ಪಕ್ಷ ಸಂಘಟಗೆ, ಕ್ಷೇತ್ರದ ಅಭಿವೃದ್ಧಿಗೆ ದುಡಿದ್ದಾರೆ ಅವರ ಸೇವೆ ಪರಿಗಣಿಸಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
ಸತತ ೪೫ ರ‍್ಷಗಳಿಂದ ಪಕ್ಷ ಸಂಘಟನೆಯಲ್ಲಿ ನಿರತರಾಗಿ ಪಕ್ಷ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂದಿರಾ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ ಹಾಗೂ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದ ಜಿ.ಎಸ್.ಪಾಟೀಲರಿಗೆ ಸ್ಥಾನಮಾನ ನೀಡಬೇಕು ಇಲ್ಲವಾದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನಿಡಿದರು.
ನರೇಗಲ್ಲ ಬ್ಲಾಕ್ ಕಮೀಟಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರಣಪ್ಪ ಬೆಟಗೇರಿ ಮಾತನಾಡಿ, ಜಿ.ಎಸ್.ಪಾಟೀಲ ಅವರು ಜಲ ಅಭಿವೃದ್ಧಿ, ರೈತರ ಭೂಮಿ ಹಿತ ಕಾಪಾಡಲು ಕ್ಷೇತ್ರಾದ್ಯಂತ ಸಾಕಷ್ಟು ಕೆರೆಗಳನ್ನು ನರ‍್ಮಿಸಿ ಸಾವಿರ ಕೆರೆಗಳ ಸರದಾರ ಎಂದು ಹೆಸರು ಮಾಡಿದ್ದಾರೆ. ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಿ ಜೀವನ ಕಲ್ಪಿಸಿಕೊಟ್ಟಿದ್ದಾರೆ. ದೀನ ದಲಿತರಿಗೆ, ಹಿಂದುಳಿದ ರ‍್ಗಗಳ ಜನರಿಗೆ ಶ್ರಮಿಕರಿಗೆ ಬದುಕು ಇಟ್ಟುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಇಂತಹ ನಾಯಕರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡುತ್ತಾ ಬರಲಾಗಿದೆ. ಈಗಲಾದರು ಸಚಿವಸ್ಥಾನ ನೀಡಿ ಸರಿಪಡಿಸಬೇಕು ಎಂದು ತಿಳಿಸಿದರು.
ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ನಿಂಗನೌಡ ಲಕ್ಕನಗೌಡ್ರ, ಅಲ್ಲಾಬಕ್ಷಿ ನದಾಫ್, ಸಂತೋಷ ಹನಮಸಾಗರ, ಶೇಖಪ್ಪ ಜುಟ್ಲ, ಗುಡದಪ್ಪ ಗೋಡಿ, ಮುತ್ತಪ್ಪ ನೂಲ್ಕಿ ಇದ್ದರು.