ಚೈತನ್ಯ ನ್ಯೂಸ್ ೨೪ ನರೇಗಲ್ಲ ಜೂ.೬:

ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ನಾಲ್ಕು ವಿದ್ಯಾರ್ಥಿಗಳು ಭಾರತೀಯ ಸೇನೆಯ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ಗೆ ಆಯ್ಕೆಯಾಗಿದ್ದಾರೆ.
ಈಚೆಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಬಿಎ ೬ನೇ ಸೆಮಿಸ್ಟರ್ನ ಕಳಕಾಪುರ ಗ್ರಾಮದ ಶಾರುಖ್ ಹಸನಸಾಬ್ ಗೌಡರ, ಬಿಎ ೪ನೇ ಸೆಮಿಸ್ಟರ್ನ ಮಾರನಬಸರಿ ಗ್ರಾಮದ ಬಸವರಾಜ್ ಲಂಕೆಪ್ಪ ಕುರಿ, ಬಿಎ ೪ನೇ ಸೆಮಿಸ್ಟರ್ನ ಜಕ್ಕಲಿ ಗ್ರಾಮದ ಶಬ್ಬೀರಸಾಬ್ ಅಲ್ಲಿಸಾಬ್ ಬಸಾಪುರ ಮತ್ತು ಬಿಎಸ್ಸಿ ೪ನೇ ಸೆಮಿಸ್ಟರ್ನ ಜಕ್ಕಲಿ ಗ್ರಾಮದ ಶಂಕರಪ್ಪ ಮಲ್ಲಪ್ಪ ಇಟಗಿ ಇವರು ಸೇನೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲರಾದ ಜಯಶ್ರೀ ಮುತಗಾರ ಪ್ರಕಟಣೆಯಲ್ಲಿ ತಿಳಿಸಿದರು.

ಅಗ್ನಿವೀರ್ಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಹಾಗೂ ರೋಣ ಮತಕ್ಷೇತ್ರದ ಶಾಸಕರಾದ ಜಿ. ಎಸ್. ಪಾಟೀಲ ಅವರು ಹಾಗೂ ಸಿಡಿಸಿ ಸದಸ್ಯರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಈಚೆಗೆ ಕಾಲೇಜಿನಲ್ಲಿ ನಡೆದ ಕಾಂಪಸ್ ಸಂದರ್ಶನದಲ್ಲಿ ವಿವಿಧ ಕಂಪನಿಗಳಿಗೆ ೭೯ ವಿದ್ಯಾರ್ಥಿಗಳು ಆಯ್ಕೆಯಾಗಿ ಬದುಕು ಕಟ್ಟಿಕೊಂಡಿದ್ದಾರೆ. ಈಗ ನಾಲ್ಕು ವಿದ್ಯಾರ್ಥಿಗಳು ಸೇನೆಗೆ ಆಯ್ಕೆಯಾಗುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪ್ರಸಕ್ತ ಸಾಲಿನ ಪ್ರಥಮ ವರ್ಷದ ಪದವಿ ಕೋರ್ಸ್ನ ಪ್ರವೇಶಾತಿಗೆ ವಿವಿಧ ಊರುಗಳಿಂದ ವಿದ್ಯಾರ್ಥಿಗಳು ಬರುತ್ತಿರುವುದು ವಿಶೇಷವಾಗಿದೆ. ಈಗಾಗಲೇ ನಮ್ಮಲ್ಲಿ ಬಿಸಿಎ ವಿಭಾಗದ ಪ್ರವೇಶಾತಿ ಪೂರ್ಣಗೊಂಡಿದ್ದು ಬಿಎ, ಬಿಕಾಂ, ಹಾಗೂ ಬಿಎಸ್ಸಿ (ಸಿಎಸ್) ವಿಭಾಗಕ್ಕೆ ಪ್ರವೇಶಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಹಾಗೂ ಪಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

—
6 ನರೇಗಲ್1: ಶಾರುಖ್ ಗೌಡರ
6 ನರೇಗಲ್2: ಬಸವರಾಜ್ ಕುರಿ
6 ನರೇಗಲ್3: ಶಬ್ಬೀರಸಾಬ್ ಬಸಾಪುರ
6 ನರೇಗಲ್4: ಶಂಕರಪ್ಪ ಇಟಗಿ