Home ಕರ್ನಾಟಕನೂತನ ಸರ್ಕಾರಕ್ಕೆ ಶುಭ ಕೋರಿದ ಜಗದ್ಗುರು ಪಂಚಪೀಠಾಧೀಶ್ವರರು

ನೂತನ ಸರ್ಕಾರಕ್ಕೆ ಶುಭ ಕೋರಿದ ಜಗದ್ಗುರು ಪಂಚಪೀಠಾಧೀಶ್ವರರು

by Editor
0 comments

ಚೈತನ್ಯ ನ್ಯೂಸ್‌ ೨೪ ಬೆ0ಗಳೂರು- ಜೂನ್-೨:

ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಶ್ರೀ ಜಗದ್ಗುರು ಪಂಚಪೀಠಾಧೀಶ್ವರರಿಗೆ ಆಹ್ವಾನ ನೀಡಲಾಗಿದೆ. ಆದರೆ ಪೂರ್ವ ನಿಗದಿಯಂತೆ ಎಲ್ಲ ಜಗದ್ಗುರುಗಳು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ನೂತನ ಮುಖ್ಯಮಂತ್ರಿ ಹಾಗೂ ಸರ್ಕಾರಕ್ಕೆ ಶ್ರೀ ಜಗದ್ಗುರು ಪಂಚಪೀಠಾಧೀಶ್ವರರು ಶುಭ ಕೋರಿದ್ದಾರೆ.
ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು, ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು, ಶ್ರೀ ಕೇದಾರ ಭೀಮಾಶಂಕರಲಿAಗ ಜಗದ್ಗುರುಗಳು, ಶ್ರೀ ಶ್ರೀಶೈಲ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಜಗದ್ಗುರುಗಳು, ಶ್ರೀ ಕಾಶಿ ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಜಗದ್ಗುರುಗಳು ಮತ್ತು ಶ್ರೀ ಕಾಶಿ ಪೀಠದ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಜಗದ್ಗುರುಗಳು ತಮ್ಮ ಹೇಳಿಕೆಯಲ್ಲಿ ಧರ್ಮದಲ್ಲಿ ರಾಜಕೀಯ ಇರಬಾರದು ಆದರೆ ರಾಜಕೀಯದಲ್ಲಿ ಧರ್ಮವಿರಬೇಕು ಎಂಬ ತತ್ವವನ್ನು ಅರಿತು ನಡೆಯುತ್ತಿರುವ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳಾಗುತ್ತಿದ್ದು, ಉತ್ತಮ ಆಡಳಿತದ ಮೂಲಕ ರಾಜ್ಯದ ಜನರ ಸೇವೆ ಮಾಡಲಿ. ಜಾತಿ, ಮತ, ಪಂಥ, ಭಾಷೆ ಇತ್ಯಾದಿ ಎಲ್ಲ ಭೇದ ಭಾವಗಳನ್ನು ತೊಡೆದು ಸರ್ವರನ್ನು ಸಮಾನವಾಗಿ ಕಂಡು ಸರ್ವ ಜನಾಂಗದವರಿಗೂ ಸಮಾನ ಅವಕಾಶ ನೀಡುವ ಆಡಳಿತ ನೀಡಲಿ ಎಂದು ಶುಭ ಹಾರೈಸಿದ್ದಾರೆ.
ಶ್ರೀ ರಂಭಾಪುರಿ ಲಿಂಗೈಕ್ಯ ಜಗದ್ಗುರು ವೀರಗಂಗಾಧರ ಅಜ್ಜಯ್ಯನವರ ಪರಮ ಶಿಷ್ಯರಾಗಿರುವ ಶಿವಕುಮಾರ್ ಅವರು “ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ” ಎಂಬ ಮಹೋನ್ನತ ಸಂದೇಶವನ್ನು ಸಾಕಾರಗೊಳಿಸುವ ವಿಶ್ವಾಸ ವ್ಯಕ್ತಪಡಿಸಿರುವ ಪಂಚಪೀಠಾಧೀಶ್ವರರು, ಮುಖ್ಯಮಂತ್ರಿಗಳ ನೂತನ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಎಲ್ಲ ಸಚಿವರಿಗೂ ಶುಭ ಹಾರೈಸಿದ್ದಾರೆ.

You may also like

Leave a Comment

➤ ಶ್ರೀ ರಂಭಾಪುರಿ ಜಗದ್ಗುರುಗಳವರ ಸಪ್ಟಂಬರ್ ಮಾಹೆಯ ಪ್ರವಾಸ    ➤ ಅಬ್ಬಿಗೇರಿ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಸನ್ಮಾನ್ಯ ಜಿ.ಎಸ್. ಪಾಟೀಲರಿಂದ ಪೂಜೆ ಸಲ್ಲಿಕೆ.   ➤    ➤ ಗಣೇಶೋತ್ಸವಕ್ಕೆ ಕಟ್ಟುನಿಟ್ಟಿನ ನಿಯಮ: ಡಿಜೆ ಸಂಪೂರ್ಣ ನಿಷೇಧ:ಶಾಂತಿಯುತ ಆಚರಣೆಗೆ ಆದ್ಯತೆ ನೀಡಿ : ಪಿ ಎಸ್ ಐ ಐಶ್ವರ್ಯ ನಾಗರಾಳ    ➤ ಜೀವನದಲ್ಲಿ ಆಸಕ್ತಿ ಕಳೆದುಕೊಂಡು ಬಾಳಬಾರದು : ಶ್ರೀ ರಂಭಾಪುರಿ ಜಗದ್ಗುರುಗಳು