Home ಜಿಲ್ಲಾ ಸುದ್ದಿಗಳುಉಚಿತ ಪಠ್ಯಪುಸ್ತಕ ವಿತರಣೆ: ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿ ಹಸ್ತಾಂತರ

ಉಚಿತ ಪಠ್ಯಪುಸ್ತಕ ವಿತರಣೆ: ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿ ಹಸ್ತಾಂತರ

by Editor
0 comments

ಚೈತನ್ಯ ನ್ಯೂಸ್‌ ೨೪ ನರೇಗಲ್ಲ ಜೂ.2:

ಸಮೀಪದ ಜಕ್ಕಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಉಚಿತ ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ವೀರಪ್ಪ ಬಿ. ಮುಕ್ಕಣ್ಣವರ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡಿ, ಶಿಕ್ಷಣವು ಮಕ್ಕಳ ಭವಿಷ್ಯ ರೂಪಿಸುವ ಪ್ರಮುಖ ಸಾಧನವಾಗಿದ್ದು, ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಬೇಕು ಎಂದು ಕರೆ ನೀಡಿದರು.
ಶಾಲೆಯ ಮುಖ್ಯಗುರು ಎಸ್.ಬಿ. ಗವಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಪಠ್ಯಪುಸ್ತಕಗಳನ್ನು ಜೋಪಾನವಾಗಿ ಬಳಸಿಕೊಂಡು ಶೈಕ್ಷಣಿಕ ಪ್ರಗತಿಗೆ ಒತ್ತು ನೀಡುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಎಸ್.ಎ. ಪಲ್ಲೇದ, ಪಿ.ಜಿ. ಹುಯಿಲಗೋಳ, ಎಸ್.ಎಸ್. ಯಲ್ಲರಡ್ಡಿ ಹಾಗೂ ಇತರ ಗುರುಮಾತೆಯರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಠ್ಯಪುಸ್ತಕಗಳನ್ನು ಸ್ವೀಕರಿಸಿದರು.

You may also like

Leave a Comment

➤ ಶ್ರೀ ರಂಭಾಪುರಿ ಜಗದ್ಗುರುಗಳವರ ಸಪ್ಟಂಬರ್ ಮಾಹೆಯ ಪ್ರವಾಸ    ➤ ಅಬ್ಬಿಗೇರಿ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಸನ್ಮಾನ್ಯ ಜಿ.ಎಸ್. ಪಾಟೀಲರಿಂದ ಪೂಜೆ ಸಲ್ಲಿಕೆ.   ➤    ➤ ಗಣೇಶೋತ್ಸವಕ್ಕೆ ಕಟ್ಟುನಿಟ್ಟಿನ ನಿಯಮ: ಡಿಜೆ ಸಂಪೂರ್ಣ ನಿಷೇಧ:ಶಾಂತಿಯುತ ಆಚರಣೆಗೆ ಆದ್ಯತೆ ನೀಡಿ : ಪಿ ಎಸ್ ಐ ಐಶ್ವರ್ಯ ನಾಗರಾಳ    ➤ ಜೀವನದಲ್ಲಿ ಆಸಕ್ತಿ ಕಳೆದುಕೊಂಡು ಬಾಳಬಾರದು : ಶ್ರೀ ರಂಭಾಪುರಿ ಜಗದ್ಗುರುಗಳು