Home Uncategorizedನಾಳೆಯಿಂದ ಕೊತಬಾಳ ಅಡವಿ ಸಿದ್ದೇಶ್ವರರ ಪುಣ್ಯಸ್ಮರಣೆ

ನಾಳೆಯಿಂದ ಕೊತಬಾಳ ಅಡವಿ ಸಿದ್ದೇಶ್ವರರ ಪುಣ್ಯಸ್ಮರಣೆ

by Editor
0 comments

ಚೈತನ್ಯ ನ್ಯೂಸ್ 24 ಕೊತಬಾಳ ಮೇ3:
ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ

ವಿವಾಹಗಳ ಪರಿಕಲ್ಪನೆ ಮೂಡಿಸಿದ ತಾಲೂಕಿನ ಕೊತಬಾಳ ಗ್ರಾಮದ ಅಡವಿ ಸಿದ್ದೇಶ್ವರರ 71ನೇ ಹಾಗೂ ರಾಜಶೇಖರ ಶಿವಯೋಗಿಗಳ 25ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಮೇ 4ರಿಂದ 8ರವರೆಗೆ 50 ಜೋಡಿ ಸಾಮೂಹಿಕ ವಿವಾಹ, ಅಯ್ಯಾಚಾರ, ಅಡ್ಡಪಲ್ಲಕ್ಕಿ ಉತ್ಸವ, ಕುಂಭಮೇಳ, ಸಾಧಕರಿಗೆ ಸನ್ಮಾನ, ಧರ್ಮಸಭೆ, ರಥೋತ್ಸವ ನಡೆಯಲಿದ್ದು, ಧಾರ್ಮಿಕ ಕಾರ್ಯಕ್ರಮಗಳ ಸಿದ್ದತೆ ಬರದಿಂದ ಸಾಗಿದೆ.

ಮೇ 4ರಂದು ಮಧ್ಯಾಹ್ನ 12ಕ್ಕೆ ಸಾಮೂಹಿಕ ವಿವಾಹಗಳ ನಡೆಯಲಿದ್ದು, ಪತ್ರಿವನಮಠದ ಸಿದ್ದವೀರ
ಶಿವಾಚಾರ್ಯರು, ಗವಿಮಠದ ಬಸವಲಿಂಗ ಸ್ವಾಮೀಜಿ, ಗುಲಗಂಜಿ ಮಠದ ಗುರುಪಾದ ದೇವರು, ಡಾ| ಕೊಟ್ಟೂರೇಶ್ವರ ಸ್ವಾಮೀಜಿ, ಅರಳೆ ಮಠದ ಸಿದ್ದಲಿಂಗ ಶಿವಾಚಾರ್ಯರು, ನವಗ್ರಹ ಹಿರೇಮಠದ ಶಿವಪೂಜೆ ಶಿವಾಚಾರ್ಯರು, ಸಿದ್ದೇಶ್ವರ ಮಠದ ಗುರುಸಿದ್ದೇಶ್ವರ ಸ್ವಾಮೀಜಿ, ಅಡವಿಸಿದ್ದೇಶ್ವರ ಮಠದ ಗಂಗಾಧರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಜಿ.ಎಸ್. ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿರುವರು. ಸಂಜೆ 4ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಶೇ. 80ಕ್ಕಿಂತ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಗುರುರಕ್ಷೆ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 8ಕ್ಕೆ ಜನಪದ ಸಂಜೆ ಕಾರ್ಯಕ್ರಮ ನಡೆಯಲಿದೆ.

You may also like

Leave a Comment

➤ ಶ್ರೀ ರಂಭಾಪುರಿ ಜಗದ್ಗುರುಗಳವರ ಸಪ್ಟಂಬರ್ ಮಾಹೆಯ ಪ್ರವಾಸ    ➤ ಅಬ್ಬಿಗೇರಿ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಸನ್ಮಾನ್ಯ ಜಿ.ಎಸ್. ಪಾಟೀಲರಿಂದ ಪೂಜೆ ಸಲ್ಲಿಕೆ.   ➤    ➤ ಗಣೇಶೋತ್ಸವಕ್ಕೆ ಕಟ್ಟುನಿಟ್ಟಿನ ನಿಯಮ: ಡಿಜೆ ಸಂಪೂರ್ಣ ನಿಷೇಧ:ಶಾಂತಿಯುತ ಆಚರಣೆಗೆ ಆದ್ಯತೆ ನೀಡಿ : ಪಿ ಎಸ್ ಐ ಐಶ್ವರ್ಯ ನಾಗರಾಳ    ➤ ಜೀವನದಲ್ಲಿ ಆಸಕ್ತಿ ಕಳೆದುಕೊಂಡು ಬಾಳಬಾರದು : ಶ್ರೀ ರಂಭಾಪುರಿ ಜಗದ್ಗುರುಗಳು