30
ಚೈತನ್ಯ ನ್ಯೂಸ್ 24, ಬಾಳೆಹೊನ್ನೂರು. ಸಪ್ಟಂಬರ್.೮:
ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ೨೦೨೬-ಸಪ್ಟಂಬರ್ ಮಾಹೆಯ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತೆ ಇರುತ್ತದೆ ಎಂದು ಶ್ರೀ ಜಗದ್ಗುರು ರಂಭಾಪುರಿ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ತಿಳಿಸಿದ್ದಾರೆ.
ದಿನಾಂಕ ೧೧ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಶ್ರಾವಣ ಪೂಜಾನುಷ್ಠಾನ ಮಂಗಲ ಸಮಾರಂಭದ ಸಾನ್ನಿಧ್ಯ ವಹಿಸುವರು. ದಿನಾಂಕ ೧೪ರಂದು ವಿಜಯಪುರ ಜಿಲ್ಲೆ ಬಬಲೇಶ್ವರ ಬೃಹನ್ಮಠದ ಪಟ್ಟಾಧಿಕಾರ ಸಮಾರಂಭ, ೧೬ರಂದು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕ ಹಳೆಯೂರು ಗ್ರಾಮದಲ್ಲಿ ಧರ್ಮ ಜಾಗೃತಿ ಸಮಾರಂಭ, ೧೭ರಂದು ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಸೌಮ್ಯ ಸಂಕೀರ್ಣದ ಉದ್ಘಾಟನೆ, ೧೮ರಂದು ಹರಪನಹಳ್ಳಿಯಲ್ಲಿ ಇಷ್ಟಲಿಂಗ ಮಹಾಪೂಜಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸುವರು. ದಿನಾಂಕ ೧೯ರಂದು ಚಿಕ್ಕನಾಯಕನಹಳ್ಳಿ ತಾಲೂಕ ಶೆಟ್ಟಿಕೆರೆಯಲ್ಲಿ ಧರ್ಮ ಜಾಗೃತಿ ಸಮಾವೇಶ, ೨೧ ಮತ್ತು ೨೨ರಂದು ಸಿಂದಗಿ ತಾಲೂಕ ಕೋರವಾರದಲ್ಲಿ ಧರ್ಮ ಜಾಗೃತಿ ಸಮಾರಂಭ, ೨೩ರಂದು ಆಳಂದ ತಾಲೂಕ ತಡಕಲ್ ಗ್ರಾಮದಲ್ಲಿ ದೇವಸ್ಥಾನ ಉದ್ಘಾಟನೆ, ೨೪ರಂದು ಆಳಂದ ತಾಲೂಕ ಸರಸಂಬಾ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸುವರು. ದಿನಾಂಕ ೨೬ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ವಾಸ್ತವ್ಯವಿದ್ದು ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡುವರು. ದಿನಾಂಕ ೨೭ರಂದು ಬೆಂಗಳೂರಿನಲ್ಲಿ ಪೀಠಾಚಾರ್ಯರ ಸಾನ್ನಿಧ್ಯದಲ್ಲಿ ವೀರಶೈವ ಲಿಂಗಾಯತ ಸಂಘಟನಾ ಸಮಾವೇಶ, ೩೦ರಂದು ಹೊಸದುರ್ಗ ತಾಲೂಕ ದೇವಪುರದಲ್ಲಿ ಪುರ ಪ್ರವೇಶ-ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸುವರು. ಶ್ರೀ ರಂಭಾಪುರಿ ಜಗದ್ಗುರುಗಳವರ ಧಾರ್ಮಿಕ ಕಾರ್ಯಕ್ರಮಗಳ ಲಾಭವನ್ನು ಸಮಸ್ತ ಧರ್ಮಾಭಿಮಾನಿಗಳು ಪಡೆದುಕೊಳ್ಳಬೇಕೆಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ಅವರು ವಿನಂತಿಸಿದ್ದಾರೆ.
,
,