ಚೈತನ್ಯ ನ್ಯೂಸ್ 24 ನರೇಗಲ್ಲ ಮೇ.11:
ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು. ಅದನ್ನು ಯಶಸ್ವಿಯಾಗಿ ಪೂರೈಸಿರುವ ವಿದ್ಯಾರ್ಥಿಗಳು ಮುಂದಿನ ಹಂತಗಳಲ್ಲಿಯೂ ಉತ್ತಮ ಸಾಧನೆ ತೋರಿ, ಉತ್ತಮ ಜ್ಞಾನದೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಂಡು ಶಿಕ್ಷಕರಿಗೆ, ಪಾಲಕರಿಗೆ, ಸಮಾಜಕ್ಕೆ ಹಾಗೂ ದೇಶಕ್ಕೆ ಒಳ್ಳೆಯ ಹೆಸರು ತರುವಂತವರಾಗಬೇಕು ಎಂದು ಈಶ್ವರಿ ಸಂಚಾಲಕಿ ಬಿ.ಕೆ ಸವಿತಕ್ಕ ವಿಷಯ ಹೇಳಿದರು.
ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರದಲ್ಲಿ ಅವರು ಮಾತನಾಡಿದರು.
ಪರೀಕ್ಷೆ ಹಬ್ಬವಿದ್ದಂತೆ. ಅದನ್ನು ಸಮರ್ಥವಾಗಿ ಎದುರಿಸಿದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಪ್ರತಿಭಾವಂತರೆನ್ನಿಸಿಕೊಳ್ಳುತ್ತಾರೆ. ಪ್ರತಿಭಾವಂತರನ್ನು ಗುರುತಿಸಿ ಸನ್ಮಾನ ಮಾಡಿದ್ದು ನಿಜಕ್ಕೂ ಶಿವನಿಗೆ ಪ್ರಿಯವಾಗಿದೆ. ಇಂತಹ ಉತ್ತಮ ಕಾರ್ಯಕ್ಕೆ ಸಹಕರಿಸಿದ ಎಲ್ಲರಿಗೂ ಆಶೀರ್ವಾದ ದೊರಕುತ್ತದೆ ಎಂದರು. ಎಸ್.ಎ. ಬಾಲಕರ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಂ.ಬಿ. ಸಜ್ಜನ ಮಾತನಾಡಿ, ಬಹಳಷ್ಟು ಅಂಕ ಗಳಿಸಿದವರನ್ನು ಕರೆದು ಸನ್ಮಾನಿಸುವುದು ಸಾಗಿ ಬಂದ ಸಂಪ್ರದಾಯ. ಆದರೆ, ಸಂಚಾಲಕಿ ಸವಿತಕ್ಕ ಅವರು ವಿಶೇಷ ಗಮನ ಹರಿಸಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕರೆದು ಸನ್ಮಾನಿಸಿದ್ದು ಶ್ಲಾಘನೀಯ. ಇದನ್ನು ಗಮನಿಸಿ ಮುಂದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿ ಬಂದು ಸನ್ಮಾನ ಸ್ವೀಕರಿಸುವಂತಾಗಬೇಕು ಎಂದರು. ಶಿಕ್ಷಕ ಎಂ.ವಿ. ಬಿಂಗಿ, ಉಪನ್ಯಾಸಕ ಶಿವಾನಂದ ಗೋಗೇರಿ ಮಾತನಾಡಿದರು. ಶಿಕ್ಷಕ ಮಹಾದೇವಪ್ಪ ಬೇವಿನಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ 21 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ನರೇಗಲ್ಲ ಪಟ್ಟಣದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸವಿತಕ್ಕ, ಎಂ.ಬಿ. ಸಜ್ಜನ, ಎಂ.ವಿ. ಬಿಂಗಿ, ಶಿವಾನಂದ ಗೋಗೇರಿ, ಮಹಾದೇವಪ್ಪ ಬೇವಿನಕಟ್ಟಿ ಇದ್ದರು