Home ಜಿಲ್ಲಾ ಸುದ್ದಿಗಳುಪ್ರಧಾನಿ ಮೋದಿ ಕರೆಗೆ ಜನರ ಸ್ಪಂದನೆ: 

ಪ್ರಧಾನಿ ಮೋದಿ ಕರೆಗೆ ಜನರ ಸ್ಪಂದನೆ: 

by Editor
0 comments

ಚೈತನ್ಯ ನ್ಯೂಸ್ 24 ಗಜೇಂದ್ರಗಡ: ಮೇ.16:

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಭಾರತಕ್ಕೆ ಇಂಧನ ಕೊರತೆ ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಜನರು ಸ್ಪಂದಿಸಿದ್ದಾರೆ ಎಂದು ಬಿಜೆಪಿಯ ಯುವ ಮುಖಂಡ ಉಮೇಶ ಚನ್ನು ಪಾಟೀಲ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಸ್ವಂತ ವಾಹನಗಳ ಬಳಕೆ ಕಡಿಮೆ ಮಾಡಿದ್ದಾರೆ. ಮೋದಿ ಅವರು ಹೇಳಿದರೆ ನಾವು ಅದನ್ನು ಚಾಚೂ ತಪ್ಪದೇ ಪಾಲಿಸುತ್ತೇವೆ ಎ೦ದು ಜನರೇ ಹೇಳುತ್ತಿದ್ದಾರೆ. ಮೋದಿ ಅವರು ಏನೇ ಹೇಳಿದರೂ ಅದರ ಹಿಂದೆ ನಮ್ಮ ಹಾಗೂ ದೇಶದ ರಕ್ಷಣೆ ಮತ್ತು ಅಭಿವೃದ್ಧಿ, ಗೌರವ, ಆರೋಗ್ಯ ಅಡಗಿರುತ್ತದೆ. ಅದಕ್ಕಾಗಿ ಮೋದಿ ಅವರು ಹೇಳಿದ್ದನ್ನು ಪಾಲಿಸುತ್ತೇವೆ ಎಂದು ಜನರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ದೇಶದ ರಕ್ಷಣೆ, ಜನರ ರಕ್ಷಣೆ, ದೇಶದ ಆರ್ಥಿಕತೆ, ದೇಶದ ಭದ್ರತೆ, ಸ್ವದೇಶಿ ಉತ್ಪನ್ನಗಳ ಬಳಕೆಯ ಹೆಚ್ಚಳ, ಮಿತವ್ಯಯ ಇದರಿಂದ ಸದೃಢ ಭಾರತ ನಿರ್ಮಿಸಲು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ನಾವೆಲ್ಲರೂ ಸ್ಪಂದಿಸೋಣ ಎಂದರು.

You may also like

Leave a Comment

➤ ಶ್ರೀ ರಂಭಾಪುರಿ ಜಗದ್ಗುರುಗಳವರ ಸಪ್ಟಂಬರ್ ಮಾಹೆಯ ಪ್ರವಾಸ    ➤ ಅಬ್ಬಿಗೇರಿ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಸನ್ಮಾನ್ಯ ಜಿ.ಎಸ್. ಪಾಟೀಲರಿಂದ ಪೂಜೆ ಸಲ್ಲಿಕೆ.   ➤    ➤ ಗಣೇಶೋತ್ಸವಕ್ಕೆ ಕಟ್ಟುನಿಟ್ಟಿನ ನಿಯಮ: ಡಿಜೆ ಸಂಪೂರ್ಣ ನಿಷೇಧ:ಶಾಂತಿಯುತ ಆಚರಣೆಗೆ ಆದ್ಯತೆ ನೀಡಿ : ಪಿ ಎಸ್ ಐ ಐಶ್ವರ್ಯ ನಾಗರಾಳ    ➤ ಜೀವನದಲ್ಲಿ ಆಸಕ್ತಿ ಕಳೆದುಕೊಂಡು ಬಾಳಬಾರದು : ಶ್ರೀ ರಂಭಾಪುರಿ ಜಗದ್ಗುರುಗಳು