ಚೈತನ್ಯ ನ್ಯೂಸ್ 24 ನರೇಗಲ್ಲ ಮೇ.18:
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದಿ0ದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯರೇ,
ಮಹಾಸಭೆಯ ಅಧ್ಯಕ್ಷರಾದ ಶ್ರೀ ಈಶ್ವರ ಬಿ. ಖಂಡ್ರೆಯವರ ಅನುಮತಿ ಮೇರೆಗೆ 2025-26ನೇ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇಕಡ 90 ಹಾಗೂ 90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಮಹಾಸಭೆಯ www.aivim.org ವೆಬ್ಬೆಟ್ಟಿನಲ್ಲಿ online ಮೂಲಕ ದಿನಾಂಕ : 25-05-2026 ರೊಳಗೆ ಸಲ್ಲಿಸುವುದು. Online ಮೂಲಕ ಬಂದ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುವುದು. ಅಂಚೆ ಅಥವಾ ಕೋರಿಯರ್ ಅಥವಾ ಖುದ್ದಾಗಿ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಈ ವಿಷಯವನ್ನು ತಾಲ್ಲೂಕಿನಾದ್ಯಂತ ಪ್ರಚಾರ ಪಡಿಸಿ, ಹೆಚ್ಚಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಹಕರಿಸುವಂತೆ ತಮ್ಮನ್ನು ವಿನಂತಿಸುತ್ತೇವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗಜೇಂದ್ರಗಡ ತಾಲೂಕ ಘಟಕದ ಅಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳು ಮಾಹಿತಿ ನೀಡಿದರು. ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ : 9448310240, 9945738273