Home ಕರ್ನಾಟಕಷಣ್ಮುಖಸ್ವಾಮಿ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

ಷಣ್ಮುಖಸ್ವಾಮಿ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

by Editor
0 comments

ಚೈತನ್ಯ ನ್ಯೂಸ್‌ 24 ಕಲಬುರ್ಗಿ ಜೂ.27:

ಬೀದರ್ ಜಿಲ್ಲೆ ಕೋಲ್ಲಾರ ಕೆ. ಪರಿಸರದಲ್ಲಿರುವ ಶ್ರೀ ಜಗದ್ಗುರು ರಂಭಾಪುರಿ ಪೀಠದ ಶ್ರೀ ಜಗದ್ಗುರು ಪಂಚಾಚಾರ್ಯ ಪುಣ್ಯಾಶ್ರಮದ ಸಂಚಾಲಕರಾದ ಷಣ್ಮುಖಸ್ವಾಮಿ ಅವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಷಣ್ಮುಖಸ್ವಾಮಿ ಅವರು ಕ್ರಿಯಾಶೀಲರಾಗಿ ಕಾಯಕ ಜೀವಿಗಳಾಗಿ ಯಾವಾಗಲೂ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರದ ನಿರ್ಮಾಣ ಕಾರ್ಯದಲ್ಲಿ ಬಹಳಷ್ಟು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ್ದನ್ನು ಮರೆಯಲಾಗದು. ವಯೋ ಸಹಜವಾದ ಕಾರಣದಿಂದ ಶುಕ್ರವಾರ ಬೆಳಗಿನ ಜಾವ ಲಿಂಗೈಕ್ಯರಾಗಿರುವುದು ನೋವಿನ ಸಂಗತಿ. ಅವರ ಅಗಲಿಕೆಯಿಂದ ಉಂಟಾದ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗದವರಿಗೆ ಅನುಗ್ರಹಿಸಲಿ. ಅವರ ಪವಿತ್ರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಅನುಗ್ರಹಿಸಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

You may also like

Leave a Comment

➤ ಶ್ರೀ ರಂಭಾಪುರಿ ಜಗದ್ಗುರುಗಳವರ ಸಪ್ಟಂಬರ್ ಮಾಹೆಯ ಪ್ರವಾಸ    ➤ ಅಬ್ಬಿಗೇರಿ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಸನ್ಮಾನ್ಯ ಜಿ.ಎಸ್. ಪಾಟೀಲರಿಂದ ಪೂಜೆ ಸಲ್ಲಿಕೆ.   ➤    ➤ ಗಣೇಶೋತ್ಸವಕ್ಕೆ ಕಟ್ಟುನಿಟ್ಟಿನ ನಿಯಮ: ಡಿಜೆ ಸಂಪೂರ್ಣ ನಿಷೇಧ:ಶಾಂತಿಯುತ ಆಚರಣೆಗೆ ಆದ್ಯತೆ ನೀಡಿ : ಪಿ ಎಸ್ ಐ ಐಶ್ವರ್ಯ ನಾಗರಾಳ    ➤ ಜೀವನದಲ್ಲಿ ಆಸಕ್ತಿ ಕಳೆದುಕೊಂಡು ಬಾಳಬಾರದು : ಶ್ರೀ ರಂಭಾಪುರಿ ಜಗದ್ಗುರುಗಳು