Home ಜಿಲ್ಲಾ ಸುದ್ದಿಗಳುನರೇಗಲ್ಲದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ನರೇಗಲ್ಲದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

by Editor
0 comments

 

ನರೇಗಲ್ಲ, ಜೂ.೨೮: ಐದು ವರ್ಷದೊಳಗಿನ ಮಕ್ಕಳನ್ನು ಪೋಲಿಯೋ ಮುಕ್ತ ಭವಿಷ್ಯದತ್ತ ಕೊಂಡೊಯ್ಯುವ ಉದ್ದೇಶದಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಇಂದು ನರೇಗಲ್ಲ ಅರ್ಬನ್ ವ್ಯಾಪ್ತಿಯಲ್ಲಿ ಚಾಲನೆ ನೀಡಲಾಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರ ನಿಡಗುಂದಿ ವ್ಯಾಪ್ತಿಯ ನರೇಗಲ್ಲ ಅರ್ಬನ್ ಪ್ರದೇಶದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ಜಂಟಿಯಾಗಿ ಡಾ. ಕೆ.ಬಿ. ಧನ್ನೂರ, ಡಾ. ಎ.ಡಿ. ಸಾಮುದ್ರಿ ಹಾಗೂ ಮಾಜಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಂಜುನಾಥ ಜಾಲಿಹಾಳ, ಮುತ್ತಣ್ಣ ಮನಿನಾಗರ, ಸಂಗೀತಾ ಮುಚಖಂಡಿ, ವಿಜಯಲಕ್ಷ್ಮೀ ಪೋಲಿಸ್ ಪಾಟೀಲ ಹಾಗೂ ಕುಮಾರಿ ರಹಮತ್ ಬಾನು ಇ. ಶರಬತ್ ವಾಲಾ ಉಪಸ್ಥಿತರಿದ್ದರು.

ನರೇಗಲ್ಲ ಅರ್ಬನ್ ವ್ಯಾಪ್ತಿಯಲ್ಲಿ ಒಟ್ಟು ೧೦ ಪೋಲಿಯೋ ಬೂತ್‌ಗಳು ಹಾಗೂ ಬಸ್ ನಿಲ್ದಾಣದಲ್ಲಿ ೧ ಟ್ರಾನ್ಸಿಟ್ ಪಾಯಿಂಟ್ ತೆರೆಯಲಾಗಿದೆ. ಅಲ್ಲದೆ ಬೋಲ್ಡಜರ ನಗರ ಮತ್ತು ಪಟ್ಟಣ ಪಂಚಾಯತ್ ಹಿಂಭಾಗದ ಪ್ರದೇಶಗಳನ್ನು ಹೈ-ರಿಸ್ಕ್ ವಲಯಗಳೆಂದು ಗುರುತಿಸಿ, ಅಲ್ಲಿನ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಉಚಿತವಾಗಿ ಪೋಲಿಯೋ ಹನಿಗಳನ್ನು ನೀಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಜೂ. ೨೮ ರಿಂದ ಜು. ೧ರವರೆಗೆ ೪ ದಿನಗಳ ಕಾಲ ನಡೆಯಲಿರುವ ಈ ಅಭಿಯಾನದಲ್ಲಿ ಮೊದಲ ದಿನ ಬೂತ್‌ಗಳ ಮೂಲಕ ಲಸಿಕೆ ವಿತರಣೆ ನಡೆಯಲಿದ್ದು, ನಂತರ ಮನೆ-ಮನೆಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕುವ ಕಾರ್ಯ ಕೈಗೊಳ್ಳಲಾಗುತ್ತದೆ.

ಪಟ್ಟಣದಲ್ಲಿ ಒಟ್ಟು ೧,೪೫೯ ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದ್ದು, ೧೫,೬೩೬ ಮನೆಗಳಿಗೆ ಭೇಟಿ ನೀಡುವ ಯೋಜನೆ ರೂಪಿಸಲಾಗಿದೆ.

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ದೇಶವನ್ನು ಪೋಲಿಯೋ ಮುಕ್ತವಾಗಿರಿಸುವ ಮಹತ್ವದ ಅಭಿಯಾನವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯ ಸಹಯೋಗದಲ್ಲಿ ಜಾಗೃತಿ ಜಾಥಾ ಮತ್ತು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಪೋಷಕರು ತಮ್ಮ ಮಕ್ಕಳಿಗೆ ಈಗಾಗಲೇ ನಿಯಮಿತ ಲಸಿಕೆಗಳು ಪೂರ್ಣಗೊಂಡಿದ್ದರೂ ಸಹ ಪಲ್ಸ್ ಪೋಲಿಯೋ ಅಭಿಯಾನದಡಿ ನೀಡಲಾಗುವ ಎರಡು ಹನಿ ಪೋಲಿಯೋ ಔಷಧಿಯನ್ನು ತಪ್ಪದೇ ಹಾಕಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಬೆಳಿಗ್ಗೆ ೮ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ವಿಶೇಷ ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

You may also like

Leave a Comment

➤ ಶ್ರೀ ರಂಭಾಪುರಿ ಜಗದ್ಗುರುಗಳವರ ಸಪ್ಟಂಬರ್ ಮಾಹೆಯ ಪ್ರವಾಸ    ➤ ಅಬ್ಬಿಗೇರಿ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಸನ್ಮಾನ್ಯ ಜಿ.ಎಸ್. ಪಾಟೀಲರಿಂದ ಪೂಜೆ ಸಲ್ಲಿಕೆ.   ➤    ➤ ಗಣೇಶೋತ್ಸವಕ್ಕೆ ಕಟ್ಟುನಿಟ್ಟಿನ ನಿಯಮ: ಡಿಜೆ ಸಂಪೂರ್ಣ ನಿಷೇಧ:ಶಾಂತಿಯುತ ಆಚರಣೆಗೆ ಆದ್ಯತೆ ನೀಡಿ : ಪಿ ಎಸ್ ಐ ಐಶ್ವರ್ಯ ನಾಗರಾಳ    ➤ ಜೀವನದಲ್ಲಿ ಆಸಕ್ತಿ ಕಳೆದುಕೊಂಡು ಬಾಳಬಾರದು : ಶ್ರೀ ರಂಭಾಪುರಿ ಜಗದ್ಗುರುಗಳು