Home ಜಿಲ್ಲಾ ಸುದ್ದಿಗಳುನರೇಗಾ ಕಾಮಗಾರಿ ಸ್ಥಳಕ್ಕೆ ತಾಪಂ ಇಒ ಕಂದಕೂರ ಭೇಟಿ

ನರೇಗಾ ಕಾಮಗಾರಿ ಸ್ಥಳಕ್ಕೆ ತಾಪಂ ಇಒ ಕಂದಕೂರ ಭೇಟಿ

by Editor
0 comments

ಚೈತನ್ಯ ನ್ಯೂಸ್ 24, ರೋಣ: ಮೇ.13:

ಸವಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಾಪುರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿ ನಡೆಯುತ್ತಿರುವ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ತಾಪಂ ಚಂದ್ರಶೇಖರ ಕಂದಕೂರ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿ ಸ್ಥಳದಲ್ಲಿ ಕೆಲಸದ ಪ್ರಗತಿ, ಗುಣಮಟ್ಟ ಹಾಗೂ ಕೂಲಿಕಾರರಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದ ಅವರು, ಸರ್ಕಾರದ ಮಾರ್ಗಸೂಚಿ ಅನುಸಾರ ಕೂಲಿಕಾರರು ಕಡ್ಡಾಯವಾಗಿ ಅಳತೆಗೆ ತಕ್ಕಂತೆ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.

ಕೆಲಸ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯದದೃಷ್ಟಿಯಿಂದ ಎಲ್ಲರೂ ಬೆಳಗ್ಗೆ ಬೇಗ ಕೆಲಸಕ್ಕೆ ಹಾಜರಾಗಿ ಮುಗಿಸಿಕೊಳ್ಳುವಂತೆ ಸಲಹೆ ನೀಡಿದರು. ಈ ವೇಳೆ ಕೂಲಿಕಾರರು ಗ್ರಾಮದಲ್ಲಿ ನಿರಂತರವಾಗಿ ನರೇಗಾ ಕಾಮಗಾರಿ ಆರಂಭಿಸಿ ಉದ್ಯೋಗಾವಕಾಶ ಕಲ್ಪಿಸು ವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಂದಕೂರ, ಗುಣಮಟ್ಟದ ಹಾಗೂ ನಿಯಮಾನುಸಾರ ಕೆಲಸ ಮಾಡಿದಲ್ಲಿ ನಿರಂತರವಾಗಿ ಕೆಲಸ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಪರಿಶೀಲನೆ ಸಂದರ್ಭದಲ್ಲಿ ಕೂಲಿಕಾರರು ಹಾಗೂ ಸಿಬ್ಬಂದಿಗೆ ಹಲವು ಸಹಲೆ-ಸೂಚನೆ ನೀಡಲಾಯಿತು. ಪ್ರತಿದಿನ ಕಡ್ಡಾಯವಾಗಿ ಎರಡು ಬಾರಿ ಎನ್ಎಎಂಎಂಎಸ್ ಆ್ಯಪ್ ಮೂಲಕ ಹಾಜರಾತಿ ದಾಖಲಿಸಬೇಕು ಎಂದು ತಿಳಿಸಲಾಯಿತು.

ಕಾಯಕ ಬಂಧುಗಳು ತಮ್ಮ ವ್ಯಾಪ್ತಿಯ ಕೂಲಿಕಾರರಿಗೆ ಪ್ರತಿದಿನ ಕೆಲಸದ ಅಳತೆ ಕುರಿತು ಮಾಹಿತಿ ನೀಡಿ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸಲು ಮಾರ್ಗದರ್ಶನ ನೀಡು ವಂತೆ ತಿಳಿಸಿದರು. ನರೇಗಾ ಯೋಜನೆ ಯಡಿ ಕೈಗೊಳ್ಳಲಾ ಗುತ್ತಿರುವ ಬದು ನಿರ್ಮಾಣ ಕಾಮಗಾರಿ ಗಳು ಗ್ರಾಮೀಣ ಭಾಗದಲ್ಲಿ ನೀರು ಸಂರಕ್ಷಣೆ, ಮಣ್ಣಿನ ಸದ್ಬಳಕೆ ಹಾಗೂ ರೈತರ ಭೂಮಿ ಅಭಿವೃದ್ಧಿಗೆ ಸಹಕಾರಿಯಾಗುತ್ತಿದ್ದು ಗ್ರಾಮಾಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತಿವೆ ಎಂದರು. ಪಿಡಿಒ, ಟಿಐಇಸಿ, ಡಿಇಒ, ಜಿಕೆ ಎಂ, ಗ್ರಾಪಂ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.

You may also like

Leave a Comment

➤ ಶ್ರೀ ರಂಭಾಪುರಿ ಜಗದ್ಗುರುಗಳವರ ಸಪ್ಟಂಬರ್ ಮಾಹೆಯ ಪ್ರವಾಸ    ➤ ಅಬ್ಬಿಗೇರಿ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಸನ್ಮಾನ್ಯ ಜಿ.ಎಸ್. ಪಾಟೀಲರಿಂದ ಪೂಜೆ ಸಲ್ಲಿಕೆ.   ➤    ➤ ಗಣೇಶೋತ್ಸವಕ್ಕೆ ಕಟ್ಟುನಿಟ್ಟಿನ ನಿಯಮ: ಡಿಜೆ ಸಂಪೂರ್ಣ ನಿಷೇಧ:ಶಾಂತಿಯುತ ಆಚರಣೆಗೆ ಆದ್ಯತೆ ನೀಡಿ : ಪಿ ಎಸ್ ಐ ಐಶ್ವರ್ಯ ನಾಗರಾಳ    ➤ ಜೀವನದಲ್ಲಿ ಆಸಕ್ತಿ ಕಳೆದುಕೊಂಡು ಬಾಳಬಾರದು : ಶ್ರೀ ರಂಭಾಪುರಿ ಜಗದ್ಗುರುಗಳು