Home ಜಿಲ್ಲಾ ಸುದ್ದಿಗಳುಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಉತ್ತಮ ಶಿಕ್ಷಣದ ಸದುಪಯೋಗ ಪಡೆಯಿರಿ : ಎಸ್. ಬಿ. ಗವಿ

ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಉತ್ತಮ ಶಿಕ್ಷಣದ ಸದುಪಯೋಗ ಪಡೆಯಿರಿ : ಎಸ್. ಬಿ. ಗವಿ

by Editor
0 comments
ಚೈತನ್ಯ ನ್ಯೂಸ್ 24 ನರೇಗಲ್ಲ ಮೇ.15:
 ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿರುವ ಶಾಲಾ ದಾಖಲಾತಿ ಆಂದೋಲನದ ಅಂಗವಾಗಿ ಜಕ್ಕಲಿ ಗ್ರಾಮದ ಕೆ.ಜಿ.ಎಸ್ ಹಾಗೂ ಎಂ.ಸಿ.ಎಸ್ ಸರ್ಕಾರಿ ಶಾಲೆಗಳಲ್ಲಿ ಬುಧವಾರ ಜನಜಾಗೃತಿ ಕಾರ್ಯಕ್ರಮದಲ್ಲಿ
 ಮಾತನಾಡಿದ ಮುಖ್ಯ ಶಿಕ್ಷಕ ಎಸ್. ಬಿ. ಗವಿ, “೬ ರಿಂದ ೧೪ ವರ್ಷದೊಳಗಿನ ಪ್ರತಿಯೊಂದು ಮಗು ಕಡ್ಡಾಯವಾಗಿ ಶಾಲೆಗೆ ಸೇರಬೇಕು. ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಶಾಲಾ ದಾಖಲಾತಿ ಆಂದೋಲನ ಹಮ್ಮಿಕೊಂಡಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಉತ್ತಮ ಶಿಕ್ಷಣದ ಸದುಪಯೋಗ ಪಡೆಯಬೇಕು” ಎಂದು ಹೇಳಿದರು.
 ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಹಾಗೂ ಉಚಿತ ಶಿಕ್ಷಣದೊಂದಿಗೆ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್‌, ಪೌಷ್ಟಿಕ ಬಿಸಿಯೂಟ, ಕ್ಷೀರಭಾಗ್ಯ ಯೋಜನೆ, ಕಂಪ್ಯೂಟರ್ ಶಿಕ್ಷಣ, ಸುಸಜ್ಜಿತ ಗ್ರಂಥಾಲಯ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ ಎಂದು ತಿಳಿಸಿದರು.
 ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅನುಭವಿ ಶಿಕ್ಷಕರಿಂದ ನಲಿ-ಕಲಿ ಪದ್ಧತಿಯಲ್ಲಿ ಬೋಧನೆ ನಡೆಯುತ್ತಿದ್ದು, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಜೊತೆಗೆ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನೂ ನಿಯಮಿತವಾಗಿ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಕಾರ್ಯದಲ್ಲಿ ಸಾರ್ವಜನಿಕರು ಹಾಗೂ ಪೋಷಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
 ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಹೆಚ್. ಎಸ್. ಬಿಂಗಿ, ಶಿಕ್ಷಕರಾದ ಎಂ. ವಿ. ತಾಳಿಕೋಟಿ, ಎಸ್. ಎ. ಪಲ್ಲೇದ, ಶಿಕ್ಷಕಿಯರಾದ ಶ್ರೀಮತಿ ಎ. ಬಿ. ಜಕ್ಕಲಿ, ಶ್ರೀಮತಿ ಎ. ಪಿ. ಶೆಟ್ಟರ, ಶ್ರೀಮತಿ ಪಿ. ಜಿ. ಹುಯಿಲಗೋಳ, ಶ್ರೀಮತಿ ಎಸ್. ಎಸ್. ಯಲ್ಲರಡ್ಡಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಅಂದಪ್ಪ ಮಾದರ, ಮುತ್ತು ಮೇಟಿ, ಬಸವರಾಜ ಮುಕ್ಕಣ್ಣವರ, ಹನಮಪ್ಪ ಜಂಗಣ್ಣವರ, ವಿಜಯ ತಳವಾರ, ಕಳಕಪ್ಪ ರಂಗಣ್ಣವರ, ಶಿವಯೋಗಿ ಹಡಪದ, ಸಂಗಪ್ಪ ಕಿಟಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

You may also like

Leave a Comment

ಸದ್ಗುಣ ಸಚ್ಚಾರಿತ್ರ್ಯದಿಂದ ಬದುಕು ಸಮೃದ್ಧ : ಶ್ರೀ ರಂಭಾಪುರಿ ಜಗದ್ಗುರುಗಳು   ಅಬ್ಬಿಗೇರಿಯಲ್ಲಿ ಕಾರ ಹುಣ್ಣಿಮೆ ಸಂಭ್ರಮ: ಬಿಳಿ ಎತ್ತಿನ ಕರಿ ಮುರಿತ – ಬಿಳಿ ಬೆಳೆಗೆ ಶುಭ ಸಂಕೇತ   ಕರಿ ಹರಿದ ಬಿಳಿ ಎತ್ತು: ಊರಿಗೇ ಒಲಿದ ಅದೃಷ್ಟ, ಈ ಬಾರಿ ಬಂಪರ್ ಬೆಳೆ ನಿಶ್ಚಿತ!   ಜೀವನದಲ್ಲಿ ಗುರಿಯಿರಲಿ ಉರಿ ಬೇಡ : ಶ್ರೀ ರಂಭಾಪುರಿ ಜಗದ್ಗುರುಗಳು   ಶ್ರೀ ರಂಭಾಪುರಿ ಜಗದ್ಗುರುಗಳವರ ಜುಲೈ ಮಾಹೆಯ ಪ್ರವಾಸ