ಚೈತನ್ಯ ನ್ಯೂಸ್ 24 ಗದಗ ಮೇ.25:
ಗದಗ ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣದಲ್ಲಿ ಸೋಮವಾರ (ಮೇ.೨೫) ಪ್ರವಾಸೋದ್ಯಮ ಇಲಾಖೆ ಮೊಬೈಲ್ ಕ್ಯಾಂಟೀನ್ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಕೆ ಪಾಟೀಲರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ ಬಿ ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ, ನೀಲವ್ವ ಬೋಳನವರ, ಮಾಜಿ ಶಾಸಕ ರಾಮಣ್ಣ ಲಮಾಣಿ, ಪಾರುಕ್ ಹುಬ್ಬಳ್ಳಿ, ಸ್ಥಳೀಯ ಮುಖಂಡರು, ಗದಗ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೋಟ್ರೇಶ್ ವಿಭೂತಿ ಇತರರು ಉಪಸ್ಥಿತರಿದ್ದರು.