ಚೈತನ್ಯ ನ್ಯೂಸ್ 24 ವಾರ್ತೆ ನರೇಗಲ್ಲ ಅ.16:
ಶ್ರೀ ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯ, ನರೇಗಲ್‌ನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವಾರ್ಷಿಕ ವಿಶೇಷ ಶಿಬಿರದ ಶಿಬಿರಾರ್ಥಿಗಳ ವತಿಯಿಂದ ಅಕ್ಟೋಬರ್ 16ರಂದು ಸಂಜೆ 6 ಗಂಟೆಗೆ ಮಾರನಬಸರಿ ಗ್ರಾಮದಲ್ಲಿ “ಪ್ರಜಾಪ್ರಭುತ್ವದಲ್ಲಿ ಮತದಾರರ ಪಾತ್ರ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಈರಣ್ಣ ಮರಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಶೇಖರಗೌಡ ಪಾಟೀಲ, ಶ್ರೀ ಚಂದ್ರಕಾಂತ ಮರನಬಸರಿ ಹಾಗೂ ಶ್ರೀ ಬುದೀಶ್ ವಣಗೇರಿ ಉಪಸ್ಥಿತರಿದ್ದರು.
ವಿಶೇಷ ಉಪನ್ಯಾಸಕರಾದ ಶ್ರೀ ಬಸವರಾಜ್ ಹೋಳಿ ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬ ಮತದಾರರು ತಮ್ಮ ಮತದಾನದ ಹಕ್ಕನ್ನು ಜವಾಬ್ದಾರಿಯಿಂದ ಚಲಾಯಿಸಬೇಕು. ಯಾವುದೇ ಆಮಿಷಗಳಿಗೆ ಒಳಗಾಗದೆ ಅರ್ಹ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮೂಲಕ ದೇಶದ ಅಭಿವೃದ್ಧಿ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಗೆ ಕೈಜೋಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀ ಜಯಕಾಂತ ನರಗುಂದ, ಶ್ರೀ ನಂದೀಶ್ ಅಚ್ಚಿ ಹಾಗೂ ಶ್ರೀ ವಿ.ಕೆ. ಸಂಗನಹಾಳ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ಎಂ.ಎಸ್. ಹೊನ್ನವಾಡ ಹಾಗೂ ಶ್ರೀ ಶರಣಯ್ಯ ಬಾಗಲತ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶ್ರೀ ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಮತದಾನದ ಮಹತ್ವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯದಲ್ಲಿ ಪಾಲ್ಗೊಂಡರು.