Home Uncategorizedಪ್ರಾಮಾಣಿಕತೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಿ: ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡಪಾಟೀಲ

ಪ್ರಾಮಾಣಿಕತೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಿ: ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡಪಾಟೀಲ

by Editor
0 comments

 

ಚೈತನ್ಯ ನ್ಯೂಸ್ 24 ರೋಣ ಮೇ.3:

ಸದ್ಯದಲ್ಲಿ ಸ್ಥಳೀಯ ಸಂಸ್ಥೆ ಸೇರಿದಂತೆ ವಿಧಾನಪರಿಷತ್ ಚುನಾವಣೆಗಳು ಬರಲಿದ್ದು ಕಾಂಗ್ರೆಸ್ ಯುವಕರು ಪ್ರಾಮಾಣಿಕತೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿದರು.

ಅವರು ಶನಿವಾರ ಪಟ್ಟಣದ ಆರ್.ಎಸ್.ಪಾಟೀಲ ಜಿನ್ನಿಂಗ್ ಪ್ಯಾಕ್ಟರಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಹಾಗೂ ಎಸ್ ಎಸ್ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ, ಆಂಗ್ಲ ಉರ್ದು ಭಾಷೆಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ತಾಪಂ, ಜಿಪಂ, ಪುರಸಭೆ ಸೇರಿದಂತೆ ವಿಧಾನ ಪರಿಷತ್ ಚುನಾವಣೆಗಳು ಶೀಘ್ರ ಘೋಷಣೆಯಾಗುವ ಎಲ್ಲ ಲಕ್ಷಣಗಳಿದ್ದು, ಪಕ್ಷದ ಬಲವರ್ಧನೆಗೆ ಶ್ರಮಿಸಬೇಕಿದೆ. ಒಬ್ಬರಮೆಲೆ ಒಬ್ಬರು ಕುಂಠನೇಪಗಳನ್ನು ಹೇಳುವ ಸ್ಥಿತಿ ಹೊರಟು ಹೊಗಿದೆ. ಪಕ್ಷಕ್ಕೆ ಪ್ರಾಮಾಣಿಕತೆ ಬೇಕಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಲಿ ಎಂದರು. ಪಕ್ಷ ಹಾಗೂ ಪಕ್ಷದ ಹಿರಿಯರು ಎಲ್ಲವನ್ನೂ ಗಮನಿಸುತ್ತಾರೆ. ಕೇವಲ ವಿಜೆಟಿಂಗ್ ಕಾರ್ಡ್ ಗೋಸ್ಕರ ಪದಾಧಿಕಾರಿಗದಿರಿ.

ಬೂತ್ ಮಟ್ಟದಲ್ಲಿ ಹೋಗಿ ಪಕ್ಷವನ್ನು ಸಂಘಟಿಸುವ ಪ್ರಾಮಾಣಿಕ ಕಾರ್ಯಕರ್ತರು ಪಕ್ಷಕ್ಕೆ ಬೇಕಾಗಿದ್ದಾರೆ. ಪದಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿ ವರ್ಷ  ಸಮೀಪಿಸುತ್ತಿದ್ದರೂ ಕೆಲವರು ಸಭೆಗಳಿಗೆ ಹಾಜರಾಗುತ್ತಿಲ್ಲ ಅಂಥವರು ಪಕ್ಷಕ್ಕೆ ಬೇಕೆ ಎಂದು ಪ್ರಶ್ನಿಸಿದ ಅವರು, ಚುನಾಯಿತರಾಗಿ ಆಯ್ಕೆಯಾಗಿದ್ದರಿಂದ ರಾಜ್ಯಾಧ್ಯಕ್ಷರ ಗಮನಕ್ಕೆ ತರಲಾಗುವುದು ಎಂದರು.

ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿವೇಕ ಯಾವಗಲ್ಲ, ರಾಜ್ಯ ಕಾರ್ಯದರ್ಶಿ ಅಕ್ಷಯ ಪಾಟೀಲ, ಮುತ್ತುರಾಜ ನವಲಗುಂದ ಸೋಮು ನಾಗರಾಜ, ಮಹೇಶ ಕಳಸಣ್ಣವರ, ಅಸ್ಲಂ ಕೊಪ್ಪಳ,ವಿನಾಯಕ ಜಕ್ಕಣಗೌಡ್ರ, ಗೋಪಿ ರಾಯನಗೌಡ್ರ ಸೇರಿದಂತೆ ಜಿಲ್ಲಾ ಉಪಸ್ಥಿತರಿದ್ದರು. ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

You may also like

Leave a Comment

➤ ಶ್ರೀ ರಂಭಾಪುರಿ ಜಗದ್ಗುರುಗಳವರ ಸಪ್ಟಂಬರ್ ಮಾಹೆಯ ಪ್ರವಾಸ    ➤ ಅಬ್ಬಿಗೇರಿ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಸನ್ಮಾನ್ಯ ಜಿ.ಎಸ್. ಪಾಟೀಲರಿಂದ ಪೂಜೆ ಸಲ್ಲಿಕೆ.   ➤    ➤ ಗಣೇಶೋತ್ಸವಕ್ಕೆ ಕಟ್ಟುನಿಟ್ಟಿನ ನಿಯಮ: ಡಿಜೆ ಸಂಪೂರ್ಣ ನಿಷೇಧ:ಶಾಂತಿಯುತ ಆಚರಣೆಗೆ ಆದ್ಯತೆ ನೀಡಿ : ಪಿ ಎಸ್ ಐ ಐಶ್ವರ್ಯ ನಾಗರಾಳ    ➤ ಜೀವನದಲ್ಲಿ ಆಸಕ್ತಿ ಕಳೆದುಕೊಂಡು ಬಾಳಬಾರದು : ಶ್ರೀ ರಂಭಾಪುರಿ ಜಗದ್ಗುರುಗಳು